ಸ್ಯಾಂಡಲ್ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಯಾರಿಗೆ ತಾನೇ ತಿಳಿದಿಲ್ಲ ಹೇಳಿ, ಕನ್ನಡ ಸಿನಿಮಾ ರಂಗದಲ್ಲಿ ತನಗಾಗಿ ಒಂದು ಸ್ಥಾನವನ್ನು ಪಡೆದು, ಸ್ಟಾರ್ ನಟಿಯಾಗಿ ಮಿಂಚಿದ ರಾಧಿಕಾ ಅವರು ಒಂದು ಮಗುವಿನ ತಾಯಿಯಾದ ನಂತರ ಸಹಾ ತನ್ನ ಅಂದ ಹಾಗೂ ಅಭಿನಯದಿಂದ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ತಮ್ಮ ಹೊಸ ಹೊಸ ಡಾನ್ಸ್ ವೀಡಿಯೋ ಗಳನ್ನು ಶೇರ್ ಮಾಡಿಕೊಂಡು ಡಾನ್ಸ್ ಪ್ರಿಯರಿಗೆ ಖುಷಿ ನೀಡುವುದರ ಜೊತೆಗೆ ಕೆಲವು ಬ್ಯೂಟಿ ಟಿಪ್ಸ್ ಗಳನ್ನು ಸಹಾ ನೀಡುವ ಮೂಲಕ ಎಲ್ಲರ ಗಮನವನ್ನು ಸೆಳೆಯುತ್ತಲೇ ಇರುತ್ತಾರೆ.
ಅನೇಕ ಯಶಸ್ವಿ ಸಿನಿಮಾಗಳಲ್ಲಿ ನಟಿಸಿದ್ದ ರಾಧಿಕಾ ಕುಮಾರಸ್ವಾಮಿ ಅವರು ಅನಂತರ ಸಿನಿಮಾಗಳಿಂದ ಕೊಂಚ ಬ್ರೇಕ್ ಪಡೆದುಕೊಂಡಿದ್ದರು. ದಮಯಂತಿ ಸಿನಿಮಾದ ಮೂಲಕ ಕಮ್ ಬ್ಯಾಕ್ ಮಾಡಿದ ರಾಧಿಕಾ ಅವರ ಅಂದ ಮತ್ತೊಮ್ಮೆ ಅಭಿಮಾನಿಗಳ ಮೇಲೆ ಮ್ಯಾಜಿಕ್ ಮಾಡಿತ್ತು. ಈಗ ಮತ್ತೊಂದು ಆಸಕ್ತಿಕರ ವಿಷಯವನ್ನು ರಾಧಿಕಾ ಕುಮಾರಸ್ವಾಮಿ ಅವರು ತಮ್ಮ ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅವರು ಈಗ ಹೊಸದೊಂದು ವೀಡಿಯೋವನ್ನು ಹಂಚಿಕೊಂಡಿದ್ದಾರೆ.
ಈ ಬಾರಿ ನಟಿಯು ಡಾನ್ಸ್ ವೀಡಿಯೋ ಅಲ್ಲ, ಬದಲಾಗಿ ಹೊಸ ವಿಷಯವನ್ನು ಅಭಿಮಾನಿಗಳಿಗೆ ತಿಳಿಸಿದ್ದಾರೆ. ನಾನು ರಾಧಿಕಾ ಕುಮಾರಸ್ವಾಮಿ ಎಂದು ಆರಂಭಿಸಿರುವ ವೀಡಿಯೋದಲ್ಲಿ ತಾನು ಒಂದು ಫೇಸ್ ಬುಕ್ ಪೇಜ್ ಅನ್ನು ತೆರೆಯುವುದಾಗಿ ಹೇಳಿದ್ದಾರೆ. ರಾಧಿಕಾ ಕುಮಾರಸ್ವಾಮಿ ಅವರ ಹೆಸರಿನ ಫ್ಯಾನ್ ಪೇಜ್ ಗಳು ಈಗಾಗಲೇ ಇವೆ. ಆದರೆ ಮೊದಲ ಬಾರಿಗೆ ರಾಧಿಕಾ ಕುಮಾರಸ್ವಾಮಿ ಅವರೇ ಸ್ವತಃ ತನ್ನ ಅಧಿಕೃತ ಫೇಸ್ ಬುಕ್ ಪೇಜ್ ಅನ್ನು ತೆರೆಯುವ ನಿರ್ಧಾರವನ್ನು ಮಾಡಿದ್ದಾರೆ.
ದಮಯಂತಿ ಮೂಲಕ ಸಿನಿಮಾಕ್ಕೆ ಕಮ್ ಬ್ಯಾಕ್ ಮಾಡಿರುವ ನಟಿ ರಾಧಿಕಾ ಕುಮಾರಸ್ವಾಮಿ ಅವರು ನಿರ್ಮಾಣ ಕಾರ್ಯದಲ್ಲೂ ತೊಡಗಿದ್ದು, ಮುಂದೆ ಹೊಸ ಹೊಸ ಪ್ರಾಜೆಕ್ಟ್ ಗಳನ್ನು ಸಹಾ ಮಾಡಲು ಸಿದ್ಧತೆಗಳನ್ನು ನಡೆಸಿದ್ದಾರೆ ಎನ್ನಲಾಗಿದ್ದು, ಅದರ ವಿಷಯವಾಗಿ ಅಭಿಮಾನಿಗಳಿಗೆ ಅಪ್ಡೇಟ್ ಮಾಡಲು ಹಾಗೂ ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರವಾಗಲು ರಾಧಿಕಾ ಕುಮಾರಸ್ವಾಮಿ ಅವರು ಇಂತಹುದೊಂದು ಪ್ರಮುಖ ನಿರ್ಧಾರವನ್ನು ಮಾಡಿದ್ದಾರೆ ಎನ್ನಲಾಗಿದೆ.