ಆಗ ರಶ್ಮಿಕಾ, ಈಗ ಅನನ್ಯ?? ವಿಜಯ್ ದೇವರಕೊಂಡ ಮನೆಯಲ್ಲಿ ಅನನ್ಯಾ ಪಾಂಡೆ: ಶಾಕ್ ಆದ ನೆಟ್ಟಿಗರು ಏನಂದ್ರು ಗೊತ್ತಾ?

0 1

ತೆಲುಗು ಚಿತ್ರರಂಗದ ಖ್ಯಾತ ಯುವ ಸ್ಟಾರ್ ನಟ ವಿಜಯ್ ದೇವರಕೊಂಡ ತಮ್ಮ ಹೊಸ ಸಿನಿಮಾ ಲೈಗರ್ ವಿಚಾರವಾಗಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸುದ್ದಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ನಟ ಸಂದರ್ಶನಗಳಲ್ಲೂ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಈಗ ಇವೆಲ್ಲವುಗಳ ನಡುವೆಯೇ ಬಾಲಿವುಡ್ ನಟಿ ಅನನ್ಯ ಪಾಂಡೆ ನಟ ವಿಜಯ ದೇವರಕೊಂಡ ಅವರ ಮನೆಯಲ್ಲಿ ಕಾಣಿಸಿಕೊಂಡಿದ್ದು, ಅವರಿಬ್ಬರ ಫೋಟೋ ವೈರಲ್ ಆಗುತ್ತಲಿದ್ದು, ಇದು ನೆಟ್ಟಿಗರಿಗೆ ಅಚ್ಚರಿಯನ್ನು ಉಂಟು ಮಾಡುತ್ತಿದೆ. ಹೌದು, ನಟ ವಿಜಯ್ ದೇವರಕೊಂಡ ಅವರ ಮನೆಯಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಅನನ್ಯ ಪಾಂಡೆ ಪಾಲ್ಗೊಂಡಿದ್ದಾರೆ.

ಅನನ್ಯ ಪಾಂಡೆ ವಿಜಯ್ ದೇವರಕೊಂಡ ಅವರ ಮನೆಯಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅಭಿಮಾನಿಗಳಿಂದ ಮೆಚ್ಚುಗೆ ಹರಿದು ಬರುತ್ತಿರುವಾಗಲೇ, ಈ ಫೋಟೋಗಳನ್ನು ನೋಡಿದ ನೆಟ್ಟಿಗರು ರಶ್ಮಿಕಾ ಮಂದಣ್ಣ ಅವರ ಬಗ್ಗೆ ಮಾತನಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಡೇಟಿಂಗ್ ನಡೆಸುತ್ತಿದ್ದಾರೆ, ಅವರಿಬ್ಬರೂ ಒಬ್ಬರನ್ನೊಬ್ಬರು ಇಷ್ಟಪಡುತ್ತಿದ್ದಾರೆ ಎನ್ನುವ ವಿಷಯ ಆಗಾಗ ಸುದ್ದಿಗಳು ಆಗುತ್ತಲೇ ಇತ್ತು. ಅದಕ್ಕೆ ಪೂರಕ ಎನ್ನುವಂತೆ ರಶ್ಮಿಕಾ ಹಾಗೂ ವಿಜಯ ದೇವರಕೊಂಡ ಆಗಾಗ ಜೊತೆಯಾಗಿ ಮಾಧ್ಯಮಗಳ ಕಣ್ಣಿಗೆ ಬೀಳುತ್ತಿದ್ದರು.

ಆದರೆ ಈ ವಿಚಾರಗಳೆಲ್ಲಾ ಸುಳ್ಳು, ನಮ್ಮ ಮಧ್ಯೆ ಅಂತಹದ್ದೇನು ಇಲ್ಲ ಎಂದು ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಇಬ್ಬರೂ ಹೇಳಿಕೊಂಡು ಬಂದಿದ್ದರು. ಇವೆಲ್ಲವುಗಳ ನಡುವೆ ಇತ್ತೀಚೆಗೆ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ನಡುವೆ ಬ್ರೇಕಪ್ ಆಗಿದೆ, ಅವರು ಈಗ ಒಳ್ಳೆಯ ಸ್ನೇಹಿತರಾಗಿ ಮಾತ್ರ ಉಳಿದಿದ್ದಾರೆ ಎಂದು ಕೂಡಾ ಸುದ್ದಿಯಾಗಿತ್ತು. ಅಲ್ಲದೇ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಶೋ ಒಂದರಲ್ಲಿ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ನಡುವೆ ಬ್ರೇಕಪ್ ಆಗಿದೆ ಎಂದು ಹೇಳುವ ಮೂಲಕ ಇನ್ನಷ್ಟು ಕುತೂಹಲವನ್ನು ಕೆರಳಿಸಿದ್ದಾರೆ.

ಈ ಹಿಂದೆ ವಿಜಯ ದೇವರಕೊಂಡ ಕುಟುಂಬದಲ್ಲಿ ನಡೆದ ಕೆಲವೊಂದು ಕಾರ್ಯಕ್ರಮಗಳಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದರು. ಆದರೆ ಈ ಬೆಳಗಿ ಬಾರಿ ನಡೆದ ವಿಶೇಷ ಪೂಜೆಯಲ್ಲಿ ಅನನ್ಯ ಪಾಂಡೆ ಕಾಣಿಸಿಕೊಂಡಿರುವುದನ್ನು ನೋಡಿ ರಶ್ಮಿಕಾ ಜಾಗಕ್ಕೆ ಅನನ್ಯ ಬಂದಂತೆ ಕಾಣುತ್ತಿದೆ ಎಂದಿದ್ದಾರೆ ನೆಟ್ಟಿಗರು. ಅಲ್ಲದೇ ರಶ್ಮಿಕಾರನ್ನು ಮತ್ತೊಮ್ಮೆ ಟ್ರೋಲ್ ಮಾಡಲಾಗುತ್ತಿದೆ. ಇದೇ ವೇಳೆ ವಿಜಯ ದೇವರಕೊಂಡ ರಶ್ಮಿಕಾರನ್ನು ಸಂಪೂರ್ಣವಾಗಿ ಮರೆತುಬಿಟ್ಟರೆ ಎಂದು ನೆಟ್ಟಿಗರು ಪ್ರಶ್ನೆಯನ್ನೂ ಮಾಡುತ್ತಿದ್ದಾರೆ.

Leave A Reply

Your email address will not be published.