ಕನ್ನಡದ ಹಿರಿಯ ನಟ, ಕಲಾ ತಪಸ್ವಿ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರ

Entertainment Featured-Articles Viral Video

ಕನ್ನಡ ಚಿತ್ರರಂಗದ ಹಿರಿಯ ನಟನಾಗಿರುವ, ಕಲಾತಪಸ್ವಿ ಎಂದೇ ಖ್ಯಾತ ನಾಮರಾಗಿರುವ ನಟ ರಾಜೇಶ ಅವರ ಆರೋಗ್ಯ ಪರಿಸ್ಥಿತಿಯು ಗಂಭೀರವಾಗಿದೆ ಎನ್ನಲಾಗಿದೆ. ಅಲ್ಲದೇ ತೀವ್ರವಾದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ರಾಜೇಶ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಪ್ರಸ್ತುತ ರಾಜೇಶ್ ಅವರನ್ನು ವೆಂಟಿಲೇಟರ್ ನಲ್ಲಿ ಇರಿಸಲಾಗಿದೆ ಎನ್ನುವ ಮಾಹಿತಿ ಹೊರಗೆ ಬಂದಿದೆ.

ರಾಜೇಶ್ ಅವರಿಗೆ 82 ವರ್ಷ ವಯಸ್ಸಾಗಿದ್ದು, ಅವರು ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಆರೋಗ್ಯದಲ್ಲಿ ಉಂಟಾದ ಸಮಸ್ಯೆಯಿಂದ ಇದೀಗ ಅವರನ್ನು ಬೆಂಗಳೂರಿನ ಕಸ್ತೂರಬಾ ನಗರದ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿರುವ ವಿಷಯ ಮಾತ್ರವೇ ತಿಳಿದು ಬಂದಿದ್ದು, ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಿದೆ.

ಕನ್ನಡ ಚಿತ್ರರಂಗದಲ್ಲಿ ನಟ ರಾಜೇಶ್ ಅವರಿಗೆ ಅವರದೇ ಆದ ಸ್ಥಾನ ಹಾಗೂ ವರ್ಚಸ್ಸು ಇದೆ. ವಿಶೇಷವಾದ ಪಾತ್ರಗಳ ಮೂಲಕ ಜನರ ಮನಸ್ಸನ್ನು ಗೆದ್ದಿದ್ದಾರೆ ಅವರು. ಬಹಳ ವರ್ಷಗಳಿಂದಲೂ ಚಿತ್ರರಂಗದಿಂದ ಅಂತರವನ್ನು ಕಾಯ್ದುಕೊಂಡು ಬಂದಿರುವ ಈ ನಟನನ್ನು ಕನ್ನಡ ಸಿನಿಪ್ರೇಮಿಗಳು ಮಾತ್ರ ಮತ್ತೆ ತೆರೆಯ ಮೇಲೆ ನೋಡಲು ನೂರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ದಶಕಗಳ ಹಿಂದೆ ತಮ್ಮ ನಟನೆಯ ಮೂಲಕ ಮೋಡಿ ಮಾಡಿದ್ದ ಅವರನ್ನು ಮತ್ತೊಮ್ಮೆ ತೆರೆ ಮೇಲೆ ನೋಡುವ ಆಸೆ ಜನರಲ್ಲಿ ಮಾಸಿಲ್ಲ.

Leave a Reply

Your email address will not be published.