ಕನ್ನಡ ಚಿತ್ರರಂಗದ, ಕೆಜಿಎಫ್ ಸಿನಿಮಾದಲ್ಲಿ ನಟಿಸಿದ್ದ ಖ್ಯಾತ ನಟನ ನಿಧನ

Written by Soma Shekar

Published on:

---Join Our Channel---

ಕನ್ನಡ ಚಿತ್ರರಂಗದ ಖ್ಯಾತ ನಟ ಮೋಹನ್ ಜುನೇಜಾ ಅವರು ವಿಧಿವಶರಾಗಿದ್ದಾರೆ. ಕಳೆದ ಕೆಲವು ಸಮಯದಿಂದಲೂ ಸಹಾ ಅವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇಂದು ಅವರು ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ನಟ ಮೋಹನ್ ಜುನೇಜ ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಅವರನ್ನು ಚಿಕ್ಕಬಾಣಾವರಣದ ಸಪ್ತಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಅವರಿಗೆ ಚಿಕಿತ್ಸೆಯನ್ನು ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕವನ್ನು ತ್ಯಜಿಸಿದ್ದಾರೆ.

ಮೋಹನ್ ಜುನೇಜ ಅವರು ಕನ್ನಡ ಹಲವು ಸಿನಿಮಾಗಳಲ್ಲಿ ಹಾಸ್ಯ ನಟ ಮತ್ತು ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡದ ಧಾರಾವಾಹಿಗಳಲ್ಲಿ ಸಹಾ ಅವರು ನಟಿಸಿದ್ದಾರೆ. ಕೆಜಿಎಫ್ ಸಿನಿಮಾಗಳಲ್ಲಿ ಸಹಾ ಅವರು ನಟಿಸಿದ್ದರು. ಕಿರುತೆರೆಯ ಮೂಲಕ ತಮ್ಮ ನಟನಾ ಜೀವನವನ್ನು ಆರಂಭಿಸಿದ್ದ ಮೋಹನ್ ಅವರು ಅನಂತರ ಸ್ಯಾಂಡಲ್ವುಡ್ ಗೆ ಎಂಟ್ರಿ ನೀಡಿ, ಸಿನಿಮಾಗಳಲ್ಲಿ ನಟಿಸುವ ಮೂಲಕ ಜನಪ್ರಿಯತೆಯನ್ನು ಪಡೆದುಕೊಂಡಿದ್ದರು.

ಸುಮಾರು 150 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.‌ ಅಗಲಿದ ನಟನ ಅಂತಿಮ ಸಂಸ್ಕಾರವನ್ನು ಇಂದು ಸಂಜೆ ಸುಮಾರು 4 ಗಂಟೆ ವೇಳೆಗೆ ತಮ್ಮೇನಹಳ್ಳಿ ಸಮೀಪದ ರುದ್ರ ಭೂಮಿಯಲ್ಲಿ ನಡೆಸಲಾಗುವುದು ಎನ್ನಲಾಗಿದೆ. ಮೋಹನ್ ಅವರು ಕೆಜಿಎಫ್ ಸಿನಿಮಾ‌ ನಂತರ ಕಬ್ಜಾ ಹಾಗೂ ಇನ್ನೂ ಕೆಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಮೋಹನ್ ಅವರ ನಿಧನಕ್ಕೆ ಸ್ಯಾಂಡಲ್ವುಡ್ ನ ಅನೇಕ ಕಲಾವಿದರು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪವನ್ನು ಸೂಚಿಸುತ್ತಿದ್ದಾರೆ.

Leave a Comment