ಕೋವಿಡ್ ಹಿನ್ನೆಲೆಯಲ್ಲಿ ಜನ್ಮದಿನ ಆಚರಣೆ ರದ್ದು ಮಾಡಿ, ವಿಶೇಷ ಮನವಿ ಮಾಡಿದ ನಿಖಿಲ್ ಕುಮಾರಸ್ವಾಮಿ

0 4

ಕೊರೊನಾ ವೈರಸ್ ಕಾರಣದಿಂದಾಗಿ ಈಗಾಗಲೇ ಹಲವು ಸಭೆ, ಸಮಾರಂಭಗಳು ಹಾಗೂ ಕಾರ್ಯಕ್ರಮಗಳ ಆಚರಣೆಗೆ ಬ್ರೇಕ್ ಬಿದ್ದಿದೆ. ಕೊರೊನಾ ಹರಡುವ ಭೀ ತಿಯ ನಡುವೆ ಇಂತಹ ಸಮಾರಂಭಗಳು ಅ ಪಾ ಯಕ್ಕೆ ಆಹ್ವಾನವನ್ನು ನೀಡಿದಂತೆಯೇ. ಇನ್ನು ಸಿನಿಮಾ ನಟರ ಜನ್ಮದಿನಗಳು ಅಂದರೆ ಸಹಜವಾಗಿಯೇ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಒಂದು ಕಡೆ ಸೇರಿ ನೆಚ್ಚಿನ ನಟನ ಜನ್ಮದಿನ ಆಚರಣೆಗೆ ಸಜ್ಜಾಗಿ ಬಿಡುತ್ತಾರೆ. ಆದ್ದರಿಂದಲೇ ಅನೇಕ ಸೆಲೆಬ್ರಿಟಿಗಳು ತಮ್ಮ ಜನ್ಮದಿನದ ಆಚರಣೆಗೆ ಕಳೆದ ಎರಡು ವರ್ಷಗಳಿಂದಲೂ ಬ್ರೇ ಕ್ ಹಾಕಿದ್ದಾರೆ.

ಇದೀಗ ಕೋವಿಡ್ ಹಿನ್ನೆಲೆಯಲ್ಲಿ ಸ್ಯಾಂಡಲ್ವುಡ್ ನ ನಟ ಮತ್ತು ಸಕ್ರಿಯ ಯುವ ರಾಜಕಾರಣಿ ಸಹಾ ಆಗಿರುವ ನಟ ನಿಖಿಲ್ ಕುಮಾರಸ್ವಾಮಿ ಅವರು ಈ ಬಾರಿ ತಮ್ಮ ಜನ್ಮದಿನದ ಆಚರಣೆಯನ್ನು ರದ್ದು ಮಾಡಿದ್ದಾರೆ. ಅಲ್ಲದೇ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕುವ ಮೂಲಕ ತಮ್ಮ ಜನ್ಮದಿನಕ್ಕೆ ಒಂದು ದಿನ ಮುಂಚಿತವಾಗಿ ಅಭಿಮಾನಿಗಳಲ್ಲಿ ಒಂದು ವಿಶೇಷ ಮನವಿಯನ್ನು ಮಾಡಿಕೊಂಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಪೋಸ್ಟ್ ನಲ್ಲಿ, “ಕೋವಿಡ್ ಸಂಕಷ್ಟದ ಸಮಯದಲ್ಲಿ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಹಾಗಾಗಿ ಈ ವರ್ಷ ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ. ಅಭಿಮಾನಿಗಳು, ಕಾರ್ಯಕರ್ತರು ಕೋವಿಡ್ ಸಂಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ತಾವಿದ್ದಲ್ಲಿಂದಲೇ ನನಗೆ ಹರಸಿ. ಒಂದು ಅರ್ಥಪೂರ್ಣ ಆಚರಣೆಗೆ ಕೈಜೋಡಿಸಿ” ಎಂದು ಬರೆದುಕೊಂಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ಹಂಚಿಕೊಂಡ ಈ ಪೋಸ್ಟ್ ನೋಡಿದ ಅವರ ಅಭಿಮಾನಿಗಳು ಅಪಾರವಾದ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಮಂದಿ ಅಭಿಮಾನಿಗಳು ಒಂದು ದಿನ ಮುಂಚಿತವಾಗಿಯೇ ತಮ್ಮ ಅಭಿಮಾನ ನಟನಿಗೆ ಜನ್ಮದಿನದ ಶುಭಾಶಯವನ್ನು ಕೋರುತ್ತಾ ಕಾಮೆಂಟ್ ಗಳನ್ನು ಮಾಡುತ್ತಾ, ಅಭಿಮಾನ ನಟನ ಜನ್ಮದಿನವನ್ನು ಸಂಭ್ರಮಿಸುತ್ತಿದ್ದಾರೆ.

Leave A Reply

Your email address will not be published.