ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಗಂಧದ ಗುಡಿ ಸಿನಿಮಾ ಬಿಡುಗಡೆಗೆ ದಿನಾಂಕ ನಿಗಧಿಯಾಗಿದೆ. ಸಿನಿಮಾ ಬಿಡುಗಡೆಗೆ ಮೊದಲೇ ಅಪ್ಪು ಅವರು ಗಂಧದ ಗುಡಿ ಟ್ರೈಲರ್ ಮೂಲಕ ಎಲ್ಲರನ್ನೂ ಮಂತ್ರಮುಗ್ಧರನ್ನಾಗಿ ಮಾಡಿದ್ದಾರೆ. ಪುನೀತ್ ರಾಜ್‍ಕುಮಾರ್ ಅವರ ಗಂಧದ ಗುಡಿ ಸಿನಿಮಾಗಾಗಿ ಅವರ ಅಸಂಖ್ಯಾತ ಅಭಿಮಾನಿಗಳು ಹಾಗೂ ಸಿನಿಮಾ ಪ್ರೇಮಿಗಳು ಸಾಕಷ್ಟು ನಿರೀಕ್ಷೆಗಳೊಂದಿಗೆ ಕಾಯುತ್ತಿದ್ದಾರೆ. ಇದೀಗ ಈ ಸಿನಿಮಾ ಟ್ರೈಲರ್ ಅನ್ನು ವೀಕ್ಷಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸಹಾ ಅಪ್ಪು ಅವರ ಗಂಧದ ಗುಡಿ ಸಿನಿಮಾಕ್ಕೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.
ಪುನೀತ್ ರಾಜ್‍ಕುಮಾರ್ ಅವರ ಕೊನೆಯ ಸಿನಿಮಾ ಗಂಧದ ಗುಡಿ ಟ್ರೈಲರ್ ಬಿಡುಗಡೆ ಆಗಿ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಸಂಖ್ಯೆಯ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದರಲ್ಲಿ ಅಪ್ಪು ಅವರನ್ನು ನೋಡಿ ಅನೇಕ ಮಂದಿ ಭಾವುಕರಾಗಿದ್ದಾರೆ. ಅಪ್ಪು ಅವರ ಮನಸ್ಸಿಗೆ ಹತ್ತಿರವಾದ ಈ ಪ್ರಾಜೆಕ್ಟ್ ನ ಟ್ರೈಲರ್ ನ ಲಿಂಕ್ ಅನ್ನು ಪುನೀತ್ ರಾಜ್‍ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಟ್ವಿಟರ್ ನಲ್ಲಿ ಶೇರ್ ಮಾಡಿ, ಪ್ರಧಾನಿಯವರಿಗೆ ಲಿಂಕ್ ಮಾಡಿದ್ದರು. ಟ್ರೈಲರ್ ನೋಡಿದ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ತಮ್ಮ ಟ್ವೀಟ್ ನಲ್ಲಿ, ಅಪ್ಪು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ವ್ಯಕ್ತಿಯಾಗಿದ್ದರು, ಶಕ್ತಿಯಿಂದ ತುಂಬಿದ್ದರು ಮತ್ತು ಅಪ್ರತಿಮ ಪ್ರತಿಭೆಯಿಂದ ಆಶೀರ್ವದಿಸಲ್ಪಟ್ಟಿದ್ದರು. ಗಂಧದಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ಸಂರಕ್ಷಣೆಗೆ ಗೌರವವಾಗಿದೆ. ಈ ಪ್ರಯತ್ನಕ್ಕೆ ನನ್ನ ಶುಭಾಶಯಗಳು ಎಂದು ಬರೆದುಕೊಂಡು ಟ್ವೀಟ್ ಮಾಡಿದ್ದಾರೆ. ಶುಭವನ್ನು ಹಾರೈಸಿದ್ದಾರೆ. ಅಪ್ಪು ಅಭಿಮಾನಿಗಳು ಈ ಟ್ವೀಟ್ ನೋಡಿ ಖುಷಿಯಾಗಿದ್ದಾರೆ. ತಾವು ಮೆಚ್ಚುಗೆಗಳನ್ನು ನೀಡಿದ್ದಾರೆ.