ನಟ ಜಗ್ಗೇಶ್ ಗೆ ಸಿಕ್ತು ರಾಜ್ಯಸಭಾ ಟಿಕೆಟ್: ರಾಯರ ಕೃಪೆ, ಪವಾಡ ಎಂದ ನಟ
ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ಯಾಂಡಲ್ವುಡ್ ನಟ ನವರಸ ನಾಯಕ ಜಗ್ಗೇಶ್ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಈ ವಿಚಾರವಾಗಿ ತಮ್ಮ ಸಂತೋಷವನ್ನು ನಟ ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದು, ಇದೆಲ್ಲವೂ ಸಹಾ ರಾಯರ ಕೃಪೆ ಎಂದು ತಾವು ನಂಬಿರುವ ದೇವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ ನಟ ಜಗ್ಗೇಶ್ ಅವರು. ಸಿನಿಮಾ, ಕಿರುತೆರೆ ಶೋ ಗಳು ಹಾಗೂ ರಾಜಕಾರಣದಲ್ಲೂ ಸಕ್ರಿಯವಾಗಿರುವ ಅವರಿಗೆ ಈಗ ಹೊಸದೊಂದು ಅವಕಾಶ ಸಿಕ್ಕಿರುವುದು ಅವರ ಅಭಿಮಾನಿಗಳಿಗೆ ಖುಷಿಯನ್ನು ನೀಡಿದೆ.
ನಟ ಜಗ್ಗೇಶ್ ಅವರು ಈ ವಿಚಾರವಾಗಿ ಟ್ವೀಟ್ ಮಾಡಿ, ಆತ್ಮೀಯ ಕನ್ನಡದ ಬಂಧುಗಳೆ 42ವರ್ಷ ತಪಸ್ಸಿನಂತೆ ಕಲಾರಂಗದಲ್ಲಿ ಸೇವೆಮಾಡಿ ಕಾಯವಾಚಮನ ಸತ್ಯಮಾರ್ಗದಲ್ಲಿ
ಬದುಕಿದ್ದೇನೆ. ನನ್ನ ನೆಚ್ಚಿನ ಭಾಜಪ ರಾಜ್ಯದ ಮುಖ್ಯ ಮಂತ್ತಿಗಳು, ಮಂತ್ರಿಗಳು, ಶಾಸಕಮಿತ್ರರು,ರಾಜ್ಯ ರಾಷ್ಟ್ರದ ಸಂಘದ ಹಿರಿಯರ ಆಶೀರ್ವಾದದಿಂದ ರಾಜ್ಯಸಭೆಗೆ ಆಯ್ಕೆ ಆಗಿರುವೆ ತಮಗೆ ಶಿರಬಾಗಿ ವಂದಿಸುವೆ.. ರಾಯರ ಕೃಪೆ ಅವರ ಪವಾಡಕ್ಕೆ ಧನ್ಯ ಎಂದು ಬರೆದುಕೊಂಡಿದ್ದಾರೆ.
ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜಿಪಿ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕರ್ನಾಟಕದಿಂದಲೇ ಮುಂದುವರೆಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಕೆ. ಸಿ ರಾಮಮೂರ್ತಿ ಅವರಿಂದ ತೆರೆವಾಗಿದ್ದ ಸ್ಥಾನಕ್ಕೆ ನಟ ಜಗ್ಗೇಶ್ ಅವರಿಗೆ ಅವಕಾಶವನ್ನು ನೀಡಲಾಗಿದೆ.
ಜಗ್ಗೇಶ್ ಅವರು ಮಾಡಿದ ಟ್ವೀಟ್ ಗೆ ಅವರ ಅಭಿಮಾನಿಗಳು ಖುಷಿಗೊಂಡಿದ್ದು, ಜಗ್ಗೇಶ್ ಅವರಿಗೆ ಶುಭ ಹಾರೈಸಿದ್ದಾರೆ. ಅವರು ಜನ ಸೇವೆ ಇನ್ನಷ್ಟು ಮಾಡಲಿ ಎಂದು ಹಾರೈಸಿದ್ದಾರೆ.