ಪುನೀತ್ ರಾಜ್‍ಕುಮಾರ್ ಅವರಿಗೆ ವಿಶೇಷ ಗೌರವ ಸಲ್ಲಿಸಿದ ಕ್ರಿಕೆಟಿಗ ಡೇವಿಡ್ ವಾರ್ನರ್

Written by Soma Shekar

Published on:

---Join Our Channel---

ಸ್ಯಾಂಡಲ್ವುಡ್ ನ ಸ್ಟಾರ್ ನಟ, ಕನ್ನಡಿಗರ ಕಣ್ಮಣಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲಾ ಅಗಲಿ ಒಂದು ತಿಂಗಳ ಮೇಲಾಗಿದೆ. ಆದರೂ ಕೂಡಾ ಅವರ ಅಗಲಿಕೆಯನ್ನುವ ಈ ಸತ್ಯವನ್ನು ಅರಗಿಸಿಕೊಳ್ಳುವುದು ಇನ್ನೂ ಸಾಧ್ಯವಾಗಿಲ್ಲ. ಇಡೀ ರಾಜ್ಯವೇ ಪ್ರತಿದಿನವೂ ಅವರನ್ನು ಸ್ಮರಿಸುತ್ತ ಕಂಬನಿ ಹರಿಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನವೂ ಅವರ ವಿಷಯವಾಗಿ ಬಹಳಷ್ಟು ಸುದ್ದಿಗಳು ಹಾಗೂ ಫೋಟೋಗಳು ಹರಿದಾಡುವ ಮೂಲಕ ಅಪ್ಪು ಅವರ ನೆನಪುಗಳನ್ನು ಹಸಿರಾಗಿರುವ ಪ್ರಯತ್ನಗಳು ನಡೆಯುತ್ತಲೇ ಇದೆ.

ಈಗ ಇವೆಲ್ಲವುಗಳ ನಡುವೆ ಆಸ್ಟ್ರೇಲಿಯಾದ ಪ್ರಖ್ಯಾತ ಕ್ರಿಕೆಟ್ ಆಟಗಾರ ಡೇವಿಡ್ ವಾರ್ನರ್ ಅವರು ಅಗಲಿದ ನಟ ಪುನೀತ್ ರಾಜಕುಮಾರ್ ಅವರಿಗೆ ಬಹಳ ವಿಭಿನ್ನವಾದ ರೀತಿಯಲ್ಲಿ ತಮ್ಮ ಶ್ರದ್ಧಾಂಜಲಿಯನ್ನು ಅರ್ಪಣೆ ಮಾಡಿದ್ದಾರ. ಡೇವಿಡ್ ವಾರ್ನರ್ ಪುನೀತ್ ರಾಜಕುಮಾರ್ ಅವರ ರಾಜಕುಮಾರ ಸಿನಿಮಾದ ಬೊಂಬೆ ಹೇಳುತೈತೆ ಹಾಡಿಗೆ ರೀ ಫೇಸ್ ಆ್ಯಪ್ ನ ಮೂಲಕ ಫೋಟೋ ಸ್ವೈಪ್ ಮಾಡಿ, ವೀಡಿಯೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

https://www.instagram.com/tv/CXDovCUpCCQ/?utm_medium=copy_link

ಹೀಗೆ ವೀಡಿಯೋ ಪೋಸ್ಟ್ ಹಂಚಿಕೊಂಡ ಅವರು ಹ್ಯಾಷ್ ಟ್ಯಾಗ್ ಹಾಕಿ ರೆಸ್ಪೆಕ್ಟ್ ಎಂದು ಬರೆದುಕೊಂಡಿದ್ದಾರೆ. ಈ ರೀತಿಯಲ್ಲಿ ಅಪ್ಪು ಅವರಿಗೆ ವಿಶೇಷವಾದ ಶ್ರದ್ಧಾಂಜಲಿಯನ್ನು ಸಲ್ಲಿಸಿದ ಡೇವಿಡ್ ವಾರ್ನರ್ ಅವರ ಪೋಸ್ಟನ್ನು ನೋಡಿ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿಗಳು ಬಹಳ ಖುಷಿಪಟ್ಟಿದ್ದಾರೆ. ಡೇವಿಡ್ ವಾರ್ನರ್ ಶೇರ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಭಿಮಾನಿಗಳಿಂದ ಮೆಚ್ಚುಗೆಗಳು ಹರಿದುಬರುತ್ತಿದೆ.

ಇನ್ನು ಇಂದು ಪಾರ್ವತಮ್ಮ ರಾಜಕುಮಾರ್ ಅವರ ಜನ್ಮದಿನದಂದು ಅಪ್ಪು ಅವರ ಕನಸೊಂದು ನನಸಾಗಲು ಹೊರಟಿದೆ. ಕನ್ನಡ ನಾಡಿನ ಅರಣ್ಯ ಸಂಪತ್ತು ಹಾಗೂ ವನ್ಯಜೀವಿ ಸಂಪತ್ತಿನ ಕುರಿತಾಗಿ ಅವರು ಚಿತ್ರಿಸಿದ್ದ ಗಂಧದ ಗುಡಿ ಸಾಕ್ಷ್ಯ ಚಿತ್ರದ ಟೀಸರ್ ಇಂದು ಬಿಡುಗಡೆಯಾಗುತ್ತಿದೆ. ನವೆಂಬರ್ ಒಂದರಂದು ಬಿಡುಗಡೆಯಾಗಬೇಕಿದ್ದ ಟೀಸರ್ ಅಪ್ಪು ಅವರ ಅಕಾಲಿಕ ನಿಧನದಿಂದ ಮುಂದೂಡಲ್ಪಟ್ಟಿತ್ತು.

ಅಪ್ಪು ಅವರ ಪತ್ನಿ ಅಶ್ವಿನಿ ಅವರು ನಿನ್ನೆಯಷ್ಟೇ, ಹಿಂದೆಂದೂ ಕಾಣದ ಸಿನಿಮಾ ಅನುಭವ ನಿಮ್ಮ ಮುಂದೆ ಎಂದು ಟ್ವೀಟ್ ಮಾಡುವ ಮೂಲಕ ಗಂಧದಗುಡಿ ಸಾಕ್ಷಚಿತ್ರ ಟೀಸರ್ ಬಿಡುಗಡೆಯ ಬಗ್ಗೆ ಮಾಹಿತಿಯನ್ನು ನೀಡಿದ್ದರು. ಅದರ ಪ್ರಕಾರ ಇಂದು ಗಂಧದ ಗುಡಿ ಸಾಕ್ಷ್ಯಚಿತ್ರ ದ ಟೀಸರ್ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳಿಗೆ ಇದು ಖಂಡಿತ ಖುಷಿಯ ವಿಚಾರವಾಗಿದೆ.

Leave a Comment