ಸೆಟ್ಟೇರಿತು ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ: ಬಾಲಿವುಡ್ ಗಿಂತಲೂ ದಕ್ಷಿಣದಲ್ಲೇ ಹೆಚ್ಚು ಪ್ಯಾನ್ ಇಂಡಿಯಾ ಸಿನಿಮಾಗಳ ಅಬ್ಬರ

Written by Soma Shekar

Published on:

---Join Our Channel---

ಬಾಲಿವುಡ್ ಗಿಂತಲೂ ದಕ್ಷಿಣ ಸಿನಿಮಾರಂಗದಲ್ಲಿ ಹೆಚ್ಚಿನ ಪ್ಯಾನ್ ಇಂಡಿಯಾ ಸಿನಿಮಾಗಳು ಸಿದ್ಧವಾಗುತ್ತಿವೆ ಎನ್ನುವುದು ವಾಸ್ತವ ವಿಷಯವಾಗಿದೆ‌ ವಿಶೇಷವಾಗಿ ಬಾಹುಬಲಿ ಹಾಗೂ ಕೆಜಿಎಫ್ ಸಿನಿಮಾಗಳ ದೊಡ್ಡ ಗೆಲುವಿನ ನಂತರ ದಕ್ಷಿಣ ಸಿನಿ ರಂಗದ ನಿರ್ಮಾಪಕರು ಹಾಗೂ ನಿರ್ದೇಶಕರು ಪ್ಯಾನ್ ಇಂಡಿಯಾ ಸಿನಿಮಾಗಳ ಕಡೆಗೆ ತಮ್ಮ ಹೆಚ್ಚಿನ ಒಲವನ್ನು ತೋರಿಸುತ್ತಿದ್ದಾರೆ. ಪ್ರಸ್ತುತ ಕೆಜಿಎಫ್ 2, ಪುಷ್ಪ, ಆರ್ ಆರ್ ಆರ್ , ಕಬ್ಜಾ, ಲೈಗರ್ ಹೀಗೆ ಸಾಲು-ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸಿದ್ಧವಾಗುತ್ತಿವೆ. ಈ ಎಲ್ಲಾ ಸಿನಿಮಾಗಳು ಕೂಡಾ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಈಗ ಇವೆಲ್ಲವುಗಳ ಮಧ್ಯೆ ಮತ್ತೊಂದು ಹೊಸ ಪ್ಯಾನ್ ಇಂಡಿಯಾ ಸಿನಿಮಾ ಸೆಟ್ಟೇರಿದೆ. ಹೌದು ಕಳೆದ ಕೆಲವು ದಿನಗಳಿಂದಲೂ ಸಹ ತೆಲುಗಿನ ಸ್ಟಾರ್ ನಟ ರಾಮ್ ಚರಣ್ ತೇಜಾ ಹಾಗೂ ದಕ್ಷಿಣದ ಪ್ರಖ್ಯಾತ ನಿರ್ದೇಶಕ ಶಂಕರ್ ಅವರ ಕಾಂಬಿನೇಶನ್ ನಲ್ಲಿ ಹೊಸ ಸಿನಿಮಾ ಒಂದು ಬರುತ್ತದೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಈ ಸುದ್ದಿಗಳು ಎಲ್ಲರ ಗಮನವನ್ನು ಸೆಳೆದಿದ್ದವು, ಆದರೆ ಸಿನಿಮಾದ ಅಧಿಕೃತ ಘೋಷಣೆಗಾಗಿ ಎಲ್ಲರ ನಿರೀಕ್ಷೆಯಿತ್ತು.

ಈಗ ಈ ಹೊಸ ಸಿನಿಮಾದ ಅಧಿಕೃತ ಘೋಷಣೆ ಆಗಿದೆ. ರಾಮ್ ಚರಣ್ ತೇಜಾ ಹಾಗೂ ಶಂಕರ್ ಕಾಂಬಿನೇಷನ್ ಸಿನಿಮಾ ಸೆಪ್ಟೆಂಬರ್ 8ರಂದು ಸೆಟ್ಟೇರಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಬಾಲಿವುಡ್ ಹಾಗೂ ತೆಲುಗು ಚಿತ್ರರಂಗದಲ್ಲಿ ಈಗಾಗಲೇ ಜನಪ್ರಿಯತೆಯನ್ನು ಪಡೆದುಕೊಂಡಿರುವ ನಟಿಯಾಗಿರುವ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಹೈದರಾಬಾದ್ ನಲ್ಲಿ ಅದ್ದೂರಿಯಾಗಿ ಸಿನಿಮಾದ ಮುಹೂರ್ತ ನೆರವೇರಿದೆ.

ಈ ಹೊಸ ಸಿನಿಮಾ ತೆಲುಗು, ಕನ್ನಡ, ತಮಿಳು ಸೇರಿದಂತೆ ಮೂರ್ನಾಲ್ಕು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಸಿನಿಮಾ ಮುಹೂರ್ತದಲ್ಲಿ ಮೊದಲ ದೃಶ್ಯಕ್ಕೆ ಮೆಗಾಸ್ಟಾರ್ ಚಿರಂಜೀವಿ ಅವರು ಕ್ಲಾಪ್ ಮಾಡಿದ್ದಾರೆ. ಚಿತ್ರದ ಮುಹೂರ್ತದ ವೇಳೆಯಲ್ಲಿ ಬಾಹುಬಲಿ ಖ್ಯಾತಿಯ ನಿರ್ದೇಶಕ ರಾಜಮೌಳಿ ಹಾಗೂ ಬಾಲಿವುಡ್ ನಟ ರಣವೀರ್ ಸಿಂಗ್ ಹಾಜರಿದ್ದು ಚಿತ್ರತಂಡಕ್ಕೆ ಶುಭ ಹಾರೈಸಿದರು.

ಶಂಕರ್ ಹಾಗೂ ರಾಮ್ ಚರಣ್ ತೇಜಾ ಕಾಂಬಿನೇಷನ್ ನಲ್ಲಿ ಬರುತ್ತಿರುವ ಮೊದಲ‌ ಸಿನಿಮಾ ಇದಾಗಿದ್ದು, ಸಿನಿಮಾ ಘೋಷಣೆಯ ನಂತರ ಅದು ನೂರು ನಿರೀಕ್ಷೆಗಖನ್ನು ಹುಟ್ಟು ಹಾಕಿದೆ. ಶಂಕರ್ ನಿರ್ದೇಶನದ ರಾಮ್ ಚರಣ್ ತೇಜ ನಾಯಕತ್ವದಲ್ಲಿ ಸಿನಿಮಾ ಹೇಗೆಲ್ಲಾ ಮೂಡಿ ಬರುತ್ತದೆ ಎನ್ನುವುದು ಸದ್ಯಕ್ಕೆ ಅಭಿಮಾನಿಗಳು ಹಾಗೂ ಸಿನಿರಸಿಕರ ಕುತೂಹಲದ ನಿರೀಕ್ಷೆಯಾಗಿದೆ.

Leave a Comment