Lawyer Jagadish :ಬಿಗ್ ಬಾಸ್ ಕನ್ನಡ ಸೀಸನ್ ಹನ್ನೊಂದರ (Bigg Boss Kannada 11) ಸ್ಪರ್ಧಿಯಾಗಿ ದೊಡ್ಮನೆ ಪ್ರವೇಶ ಮಾಡಿರುವ ವಕೀಲ ಜಗದೀಶ್ (Lawyer Jagadish)ಅವರು ಪಡೆದಿದ್ದ ಲಾಯರ್ ಲೈಸೆನ್ಸ್ ಅನ್ನು ದೆಹಲಿ ಬಾರ್ ಕೌನ್ಸಿಲ್ ರದ್ದುಗೊಳಿಸಿದೆ ಎನ್ನುವ ಸುದ್ದಿ ಈಗ ವೈರಲ್ ಆಗ್ತಿದೆ. ಅವರು ಫೇಕ್ ಮಾರ್ಕ್ಸ್ ಕಾರ್ಡ್ ನೀಡಿ ಪದವಿ ಹಾಗೂ ಎಲ್‌ಎಲ್‌ಬಿ ಪದವಿ ಮಾಡಿ ಬಾರ್ ಕೌನ್ಸಿಲ್ ಅನುಮತಿ ಪಡೆದಿದ್ದರೆನ್ನಲಾಗಿದೆ.
ಮಾಜಿ ಬಿಗ್ ಬಾಸ್ ಸ್ಪರ್ಧಿ ಮತ್ತು ಸಾಮಾಜಿಕ ಹೋರಾಟಗಾರ ಎಂದು ಕರೆಸಿಕೊಂಡಿರುವ ಪ್ರಶಾಂತ್ ಸಂಬರಗಿ (Prashant Sambargi) ಅವರು ಈ ಕುರಿತಾದಂತಹ ದಾಖಲೆಗಳನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಅವರು ಒಂದಷ್ಟು ವಿಚಾರಗಳನ್ನು ಸಹಾ ತಿಳಿಸಿದ್ದಾರೆ.
ʼBigg boss ಜಗದೀಶನ ಲಾ ಡಿಗ್ರಿ ಕ್ಯಾನ್ಸಲ್ ಆಗಿದೆ. ಆತನ 2nd PUC ಮಾರ್ಕ್ಸ್ ಕಾರ್ಡ್ ನಕಲಿ ಆಗಿರೋದ್ರಿಂದ, ನಂತರದ ಡಿಗ್ರಿಗಳು (ಕಾನೂನು ಡಿಗ್ರಿ ಸೇರಿ) ಮಾನ್ಯವಲ್ಲದಿದ್ದುದರಿಂದ ಆತನ ಸನ್ನದ್ದು ವಾಪಾಸ್ ಕೊಡುವಂತೆ ಬಾರ್ ಕೌನ್ಸಿಲ್ ಆದೇಶ ನೀಡಿದೆ. Don’t call him lawyer shaeeb. It’s an insult to advocates ಎಂದು ಸಂಬರ್ಗಿ ಬರೆದುಕೊಂಡಿದ್ದಾರೆ.
ಇನ್ನು ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಬಿಗ್ ಬಾಸ್ ಗೆ ಮತ್ತು ಶೋ ಗೆ ಅವಾಜ್ ಹಾಕಿ ದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ. ಅವರು ಮಾತುಗಳು ವೈರಲ್ ಆಗಿದೆ. ವೀಕೆಂಡ್ ನಲ್ಲಿ ಕಿಚ್ಚ ಸುದೀಪ್ ಇದನ್ನು ಹೇಗೆ ಹ್ಯಾಂಡಲ್ ಮಾಡ್ತಾರೆ ಅನ್ನೋದನ್ನ ನೋಡಬೇಕಾಗಿದೆ.
ನಿಮಿಷವೊಂದಕ್ಕೆ 50 ಲಕ್ಷ, Jhanvi Kapoor ಸಂಭಾವನೆ ಕೇಳಿದ್ರೆ ಬೆಚ್ಚಿ ಬೀಳೋದು ಖಚಿತ, ಅಂತದ್ದೇನಿದೆ ಈ ನಟಿ ಹತ್ರ