Rachita Ram: ಇಂತಹವರನ್ನು ಗಲ್ಲಿಗೇರಿಸುವ ಬದಲಿಗೆ ಜನ ಸಾಮಾನ್ಯರಿಗೆ ಒಪ್ಪಿಸಿ; ನಟಿ ರಚಿತಾ ರಾಮ್

Written by Soma Shekar

Published on:

---Join Our Channel---

Rachita Ram: ಹುಬ್ಬಳ್ಳಿಯಲ್ಲಿ (Hubballi) ನಡೆದಂತಹ ನೇಹಾ ಹಿರೇಮಠ್ (Neha Hiremath) ಹ ತ್ಯೆ ಪ್ರಕರಣದ ಕುರಿತಾಗಿ ಈಗಾಗಲೇ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಗಳಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಜನರು ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಇಂತಹುದೊಂದು ಕೃತ್ಯ ಮಾಡಿದ ತಪ್ಪಿತಸ್ಥನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಅನೇಕರು ಆಗ್ರಹಿಸುತ್ತಿದ್ದಾರೆ. ಈ ವಿಚಾರವಾಗಿ ನಿನ್ನೆಯಷ್ಟೇ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ (Dhruva Sarja) ಅವರು ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದರು.

ಈಗ ಅದರ ಬೆನ್ನಲ್ಲೇ ಈ ಪ್ರಕರಣದ ಕುರಿತಾಗಿ ಕನ್ನಡ ಚಿತ್ರರಂಗದ ಜನಪ್ರಿಯ ನಟಿ ರಚಿತರಾಮ್ (Rachita Ram) ಅವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಗಾರನಿಗೆ ತಕ್ಕ ಶಿಕ್ಷೆ ಆಗಬೇಕೆಂದು ಅಗ್ರಹಿಸಿದ್ದಾರೆ. ಪ್ರಕರಣದ ಕುರಿತಾಗಿ instagram ನಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿಕೊಂಡಿರುವ ರಚಿತರಾಮ್ ಅವರು ಈ ರೀತಿಯ ಕೃತ್ಯವನ್ನು ಮಾಡುವವರನ್ನು ಗಲ್ಲಿಗೆ ಏರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ.

ನಟಿ ತಮ್ಮ ಪೋಸ್ಟ್ ನಲ್ಲಿ ಜಾತಿ, ಧರ್ಮ ಯಾವುದೇ ಆಗಿರಲಿ ಮೊದಲು ನಾವು ಮಾನವರು. ನಾನು ಈ ಪೋಸ್ಟ್ ಹಾಕಲು ಕಾರಣ ಆಕೆಗೆ ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೇ. ಸರ್ಕಾರಕ್ಕೆ ನನ್ನ ಒಂದು ಮನವಿ ರಾಜಕೀಯ ಆಯಾಮದಲ್ಲಿ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ ಈಗ ನ್ಯಾಯ ಬೇಕಾಗಿದೆ ಅಷ್ಟೇ.

ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಬರೆದುಕೊಂಡಿದ್ದಾರೆ. ನಟಿ ರಚಿತಾ ರಾಮ್ ಅವರು ನೇಹಾ ಹಿರೇಮಠ ಅವರ ಫೋಟೋದೊಂದಿಗೆ ತಮ್ಮ ಪೋಸ್ಟ್ ಶೇರ್ ಮಾಡಿದ್ದು, ವೀ ವಾಂಟ್ ಜಸ್ಟಿಸ್ ಎನ್ನುವ ಹ್ಯಾಷ್ ಟ್ಯಾಗ್ ಅನ್ನು ಸಹಾ ಹಾಕಿದ್ದಾರೆ. ರಚಿತಾ ರಾಮ್ ಅವರು ಶೇರ್ ಮಾಡಿದ ಪೋಸ್ಟ್ ಈಗ ವೈರಲ್ ಆಗಿದೆ.

Leave a Comment