Student Scholarship: ಭಾರತೀಯ ಸ್ಟೇಟ್ ಬ್ಯಾಂಕ್ ಭಾರತದ ದೊಡ್ಡ ಉಳಿತಾಯ ಬ್ಯಾಂಕ್ ಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಇನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ನೀವು ಖಾತೆ ಹೊಂದಿದ್ದರೆ, ನೀವು ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. ಇನ್ನು ಸ್ಟೇಟ್ ಬ್ಯಾಂಕ್ ನಲ್ಲಿ ನೀವು ಹೂಡಿಕೆ ಮಾಡುವ ಮೂಲಕ ನೀವು ಹೆಚ್ಚಿನ ಆದಾಯವನ್ನು ಸಹ ಪಡೆಯಬಹುದು. ಈ ಎಲ್ಲವೂ ಸಹ ನಿಮೆಲ್ಲರಿಗೂ ತಿಳಿದಿರುವ ವಿಷಯ. ಆದರೆ SBI ಫೌಂಡೇಶನ್ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ವೇತನವನ್ನು ಸಹ ನೀಡಲಾಗುತ್ತಿದೆ.
ಹೌದು, ಬಡತನ ರೇಖೆಗಿಂತ ಕಡಿಮೆ ಇರುವ ಕುಟುಂಬಗಳ ಮಕ್ಕಳ ವಿದ್ಯಭ್ಯಾಸಕ್ಕಾಗಿ ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೇಗವನ್ನು ನೀಡುತ್ತಿದೆ. SBI ಫೌಂಡೇಶನ್ ಅಡಿಯಲ್ಲಿ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ SBI ನಿಂದ ಸ್ಕಾಲರ್ಶಿಪ್ ನೀಡಲಾಗುತ್ತಿದೆ. ಹಾಗಾದರೆ, ಇದನ್ನು ಪಡೆಯಲು ಆರ್ಹತೆಗಳೇನು, ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರ ನೀಡುತ್ತೇವೆ, ಅದಕ್ಕಾಗಿ ಈ ಪುಟವನ್ನು ಪೂರ್ತಿಯಾಗಿ ಓದಿ..
ನಮ್ಮ ದೇಶದಲ್ಲಿ ಅನೇಕ ಬಡವರ ಮಕ್ಕಳು ಹಣದ ಕೊರತೆಯಿಂದಾಗಿ ವಿದ್ಯಾಭ್ಯಾಸದಿಂದ ವಂಚಿತರಾಗಿದ್ದಾರೆ. ಇನ್ನು ಅಂತವರ ವಿದ್ಯಾಬ್ಯಾಸ ಪೂರ್ಣಗೊಳಿಸಲು ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್ ನಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ನೀವು ಇದರಲ್ಲಿ ವಾರ್ಷಿಕವಾಗಿ ಸುಮಾರು 10000 ವರೆಗೂ ವಿದ್ಯಾರ್ಥಿ ವೇತನವನ್ನು ಪಡೆಯಬಹುದು.
ಈ ವಿದ್ಯಾರ್ಥಿ ವೇತನವನ್ನು ಪಡೆಯಲು, ವಿದ್ಯಾರ್ಥಿಯು 12ನೇ ತರಗತಿಯನ್ನು ಓದುತ್ತಿರಬೇಕು. ಹಾಗೂ ಹಿಂದಿನ ಶೈಕ್ಷಣಿಕ ವರ್ಷದಲ್ಲಿ 75% ಗಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು. ಇನ್ನು ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು. ಇನ್ನು ಭಾರತದಲ್ಲಿರುವ ಎಲ್ಲಾ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸಲು, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಪಾಸ್ ಪೋರ್ಟ್ ಸೈಜ್ ಫೋಟೋ, ಕಾಲೇಜಿನಲ್ಲಿ 12ನೇ ತರಗತಿಯ ಪ್ರವೇಶ ಪತ್ರ, ಕಳೆದ ಶೈಕ್ಷಣಿಕ ವರ್ಷದ ಅಂಕ ಪಟ್ಟಿ, ಇನ್ನು ಮುಂತಾದ ದಾಖಲೆಗಳನ್ನು ಹೊಂದಿರಬೇಕು. ಇನ್ನು ಅರ್ಜಿ ಸಲ್ಲಿಸಿದ ನಂತರ ಫಲಾನುಭವಿಗಳಿಗೆ 10000 ರೂಗಳನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ.