Rachita Ram: ದರ್ಶನ್ ನನಗೆ ಗುರು ಸಮಾನ, ನಂಬೋದಕ್ಕೆ ಕಷ್ಟ ಆಗ್ತಿದೆ ಎನ್ನುತ್ತಾ ದರ್ಶನ್ ಬಗ್ಗೆ ರಚಿತಾ ರಿಯಾಕ್ಷನ್

Written by Soma Shekar

Published on:

---Join Our Channel---

Rachita Ram: ಸ್ಯಾಂಡಲ್ವುಡ್ ನಟ ದರ್ಶನ್ (Darshan) ಅರೆಸ್ಟ್ ಕೇಸ್ ವಿಚಾರವಾಗಿ ಪ್ರತಿದಿನವೂ ಸುದ್ದಿಗಳಾಗುತ್ತಲೇ ಇವೆ. ಸ್ಯಾಂಡಲ್ವುಡ್ ನ ಸೆಲೆಬ್ರಿಟಿಗಳು ಸಹಾ ಒಬ್ಬೊಬ್ಬರಾಗಿ ಈ ವಿಚಾರದ ಕುರಿತಾಗಿ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಈಗಾಗಲೇ ಕೆಲವು ನಟರು ಹೆಸರು ಹೇಳದೇ ಪರೋಕ್ಷವಾಗಿ ಪ್ರಸ್ತುತ ಬೆಳವಣಿಗೆಗಳ ಕುರಿತಾಗಿ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಇನ್ನೂ ಕೆಲವರು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿ ತಮ್ಮ ಅನಿಸಿಕೆ ಶೇರ್ ಮಾಡಿದ್ದಾರೆ.

ಸ್ಯಾಂಡಲ್ವುಡ್ ನಲ್ಲಿ ಸ್ಟಾರ್ ನಟಿಯಾಗಿರುವ ನಟಿ ರಚಿತಾ ರಾಮ್ (Rachita Ram) ಅವರು ಸಹಾ ದರ್ಶನ್ ಅವರ ವಿಚಾರವಾಗಿ ತಮ್ಮ ಪ್ರತಿಕ್ರಿಯೆಯನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಪೋಸ್ಟ್ ಒಂದರ ಮೂಲಕ ಶೇರ್ ಮಾಡಿಕೊಂಡಿದ್ದಾರೆ. ನಟಿಯು ಬರೆದುಕೊಂಡ ಸಾಲುಗಳನ್ನು ನೋಡಿ ದರ್ಶನ್ ಅಭಿಮಾನಿಗಳು ಖುಷಿಯಾಗಿದ್ದು, ನಟಿಯ ಮಾತಿಗೆ ತಮ್ಮ ಕಡೆಯಿಂದ ಮೆಚ್ಚುಗೆಗಳನ್ನು ಸಹಾ ನೀಡುತ್ತಿದ್ದಾರೆ.

ರಚಿತಾ ಅವರು ತಮ್ಮ ಪೋಸ್ಟ್ ನಲ್ಲಿ, ನಮಸ್ಕಾರ
ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚಿಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು! ಮೊದಲನೇಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹ ತ್ಯೆ ಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ.

ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತಿರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತಿರಿ ಎಂದು ಆಶಿಸುತ್ತೇನೆ.. ಎಂದು ಹೇಳಿದ್ದಾರೆ.‌

Leave a Comment