Upendra: ವಿಚಾರಣೆ ಪಾರದರ್ಶಕವಾಗಿ ಇರಬೇಕು; ಆತಂಕ, ಅನುಮಾನ ಕಾಡಿದೆ ಎಂದ ಉಪೇಂದ್ರ

Written by Soma Shekar

Published on:

---Join Our Channel---

Upendra : ರೇಣುಕಾ ಸ್ವಾಮಿ ಕೊ ಲೆ ಪ್ರಕರಣ (Renukaswamy Case) ಸದ್ಯಕ್ಕೆ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ವಿಚಾರವಾಗಿದೆ. ಈ ಪ್ರಕರಣದಲ್ಲಿ ನಟ ದರ್ಶನ್ (Darshan) ಅವರು ಅರೆಸ್ಟ್ ಆಗಿ ಪೊಲೀಸರ ಬಂಧನದಲ್ಲಿ ಇದ್ದಾರೆ. ತನಿಖೆ ನಡೆಯುತ್ತಿದ್ದು ವಿಚಾರಣೆ ದಿನದಿಂದ ದಿನಕ್ಕೆ ಸಾಕಷ್ಟು ಹೊಸ ವಿಚಾರಗಳನ್ನ ತಿಳಿಸುತ್ತಿದೆ ಎಂಬುದಾಗಿ ಮಾದ್ಯಮಗಳಲ್ಲಿ ಈಗಾಗಲೇ ಹತ್ತು ಹಲವು ಸುದ್ದಿಗಳಾಗಿದೆ. ನಿನ್ನೆ ಈ ವಿಚಾರವಾಗಿ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ ಬೆನ್ನಲ್ಲೇ ಈಗ ರಿಯಲ್ ಸ್ಟಾರ್ ಉಪೇಂದ್ರ (Upedra) ಅವರು ಸೋಶಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಶೇರ್ ಮಾಡಿದ್ದಾರೆ.

ನಟ ಉಪೇಂದ್ರ ಅವರು ಶೇರ್ ಮಾಡಿದ ಪೋಸ್ಟ್ ನಲ್ಲಿ, ದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ ಎಂಬ ಶೀರ್ಷಿಕೆಯನ್ನು ಹಾಕಿದ್ದು, ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊ ಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಷ್ಪಕ್ಷವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ.

ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ, ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು.

ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು, ಕಾನೂನು ಸುಧಾರಣೆಗಳು. ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು.

ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ಬರೆದುಕೊಂಡಿದ್ದಾರೆ.

Leave a Comment