Mahalakshmi Ravinder ಕಿರುತೆರೆ ನಟಿ ಮಹಾಲಕ್ಷ್ಮಿ ಹಾಗೂ ರವೀಂದರ್ ಚಂದ್ರಶೇಖರ್ ಜೋಡಿಗೆ ಚೆನ್ನೈ ಪೊಲೀಸರಿಂದ ಶಾಕ್ ! ಮಾಡಿದ ಆರೋಪ ಏನು ಗೊತ್ತೆ ?
Mahalakshmi Ravinder ಮದುವೆ ಆದಲ್ಲಿಂದ ಸದಾ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಿದ್ದ ಕಿರುತೆರೆ ನಟಿ ಮಹಾಲಕ್ಷ್ಮಿ- ರವೀಂದರ್ ಚಂದ್ರಶೇಖರ್ ಜೋಡಿಗೆ ಚೆನ್ನೈ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಪತಿ ಹಾಗೂ ನಿರ್ಮಾಪಕ ರವೀಂದ್ರ ಚಂದ್ರಶೇಖರನ್‌ರನ್ನು ವಂಚನೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ರವೀಂದರ್ ಚಂದ್ರಶೇಖರ್ ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕರಲ್ಲಿ ಒಬ್ಬರು. ಲಿಬ್ರಾ ಪ್ರೊಡಕ್ಷನ್ಸ್ ಎಂಬ ಸಂಸ್ಥೆಯ ಮೂಲಕ ಸಿನಿಮಾಗಳನ್ನು ನಿರ್ಮಿಸುತ್ತಿದ್ದಾರೆ. ಕಳೆದ ವರ್ಷವಷ್ಟೇ ಕಿರುತೆರೆ ನಟಿ ಮಹಾಲಕ್ಷ್ಮಿಯನ್ನು ಮದುವೆಯಾಗಿದ್ದರು. ಆದರೆ ಇದೀಗ ₹16 ಕೋಟಿ ವಂಚನೆ ಪ್ರಕರಣದಲ್ಲಿ ಕಿರುತೆರೆ ನಟಿ ಮಹಾಲಕ್ಷ್ಮಿ ಪತಿ ಹಾಗೂ ಕಾಲಿವುಡ್ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಅವರನ್ನು CCB ಪೊಲೀಸರು ಬಂಧಿಸಿದ್ದಾರೆ.
2021ರಲ್ಲಿ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಬಾಲಾಜಿ ಎಂಬುವವರನ್ನು ಪಾಲುದಾರನಾಗಿ ಸೇರಿಸಿಕೊಳ್ಳುವುದಾಗಿ ಹೇಳಿ 16 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ರವೀಂದರ್ ಚಂದ್ರಶೇಖರನ್ ವಿರುದ್ಧ ದೂರು ಕೇಳಿ ಬಂದಿದೆ.
ಮಹಾಲಕ್ಷ್ಮಿ ಕಾನೂನು ಹೋರಾಟ ಮಾಡುತ್ತಿದ್ದಾರೆ. ಪತಿಯನ್ನು ನಿರಾಪರಾಧಿ ಎಂದು ಸಾಬೀತು ಪಡೆಸಲು ಪ್ರಯತ್ನಿಸುತ್ತಿದ್ದಾರೆ. ಪತಿಗೆ ಜೈಲಿನಲ್ಲಿ ವಿಐಪಿಗಳಿಗೆ ನೀಡುವ ಎ ಕ್ಲಾಸ್ ಸೆಲ್ ನೀಡಬೇಕು ಎಂದು ಆಗ್ರಹಿಸಿ ಮಹಾಲಕ್ಷ್ಮಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಮನವಿ ಜೊತೆಗೆ ಜಾಮೀನು ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಆದರೆ ನ್ಯಾಯಾಲಯ ಎರಡೂ ಅರ್ಜಿಗಳನ್ನು ವಜಾಗೊಳಿಸಿದ್ದು, ಮಹಾಲಕ್ಷ್ಮಿ ಪತಿಗೆ ಇನ್ನಷ್ಟು ದಿನ ಜೈಲೇ ಗತಿಯಾಗಿದೆ.
ರವೀಂದ್ರ ತಮ್ಮ ಲಿಬ್ರಾ ಪ್ರೊಡಕ್ಷನ್ಸ್ ಅಡಿ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆ ಹಣ ಹೂಡಿಕೆ ಮಾಡುವಂತೆ ಉದ್ಯಮಿ ಬಾಲಾಜಿ ಕಾಪಾರನ್ನು ಪ್ರೇರೇಪಿಸಿದ್ದರು. ಈ ಸಂಬಂಧ ಸೆಪ್ಟೆಂಬರ್ 2020ಯಲ್ಲಿ ಸುಮಾರು 15.38 ಕೋಟಿ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದರು. ಆದರೆ, ಹಣ ಪಡೆದ ಬಳಿಕ ಯೋಜನೆಯನ್ನು ಆರಂಭಿಸಿಲ್ಲ ಹಾಗೂ ಹಣವನ್ನೂ ಹಿಂತಿರುಗಿಸಿಲ್ಲ ಎಂದು ಚೆನ್ನೈ ಪೊಲೀಸರಿಗೆ ದೂರು ನೀಡಿದ್ದರು.
ಉದ್ಯಮಿ ಬಾಲಾಜಿ ಕಾಪಾ ನೀಡಿದ ದೂರಿನ ಮೇರೆಗೆ ತನಿಖೆಯನ್ನು ನಡೆಸಲಾಗಿತ್ತು. ಇದರಲ್ಲಿ ರವೀಂದ್ರ ಚಂದ್ರಶೇಖರ್ ದಾಖಲೆಗಳನ್ನು ನಕಲು ಮಾಡಿದ್ದು ಬೆಳಕಿಗೆ ಬಂದಿದೆ. ಈ ಸಂಬಂಧ ರವೀಂದ್ರರನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರು ಪಡಿಸಲಾಗಿತ್ತು. ಸದ್ಯ ನ್ಯಾಯಾಧೀಶರ ಆದೇಶದ ಹಿನ್ನೆಲೆ ರವೀಂದರ್ ಜೈಲಿನಲ್ಲಿದ್ದಾರೆ.