ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ ಹೋದ ನಂತರ ಈ ವಿಚಾರವಾಗಿ ಕಾಂಗ್ರೆಸ್ ಪಾರ್ಟಿಯು ಪ್ರಧಾನಿಯ ವಿದೇಶ ಪ್ರವಾಸದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಾಗ್ದಾಳಿ ಯನ್ನು ನಡೆಸಿತ್ತು. ಆದರೆ ಈಗ ಕಾಂಗ್ರೆಸ್ ಗೆ ಮುಜುಗರವಾಗುವಂತಹ ಒಂದು ವೀಡಿಯೋ ವೈರಲ್ ಆಗಿದ್ದು, ಬಿಜೆಪಿ ನಾಯಕರು ತಮ್ಮ ಟ್ವಿಟರ್ ಖಾತೆಗಳಲ್ಲಿ ಈ ವೀಡಿಯೋವನ್ನು ಶೇರ್ ಮಾಡಿಕೊಂಡಿದ್ದು, ರಾಹುಲ್ ಗಾಂಧಿಯವರನ್ನು ಟೀಕೆ ಮಾಡುತ್ತಿದ್ದಾರೆ. ಹೌದು ರಾಹುಲ್ ಗಾಂಧಿ ಅವರು ಈ ಹೊಸ ವೀಡಿಯೋ ಈಗ ತೀವ್ರ ಚರ್ಚೆಗಳನ್ನು ಹುಟ್ಟು ಹಾಕಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೆರೆಯ ದೇಶ ನೇಪಾಳದ ರಾಜಧಾನಿ ಕಠ್ಮಂಡುವಿನ ಒಂದು ನೈಟ್ ಕ್ಲಬ್ ನಲ್ಲಿ ಪಾರ್ಟಿಯೊಂದರಲ್ಲಿ ಕಾಣಿಸಿಕೊಂಡಿರುವುದು ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ. ರಾಜಕೀಯ ಬಿಕ್ಕಟ್ಟು, ಪಕ್ಷದ ಬಿಕ್ಕಟ್ಟು, ಇತರೆ ಸಮಸ್ಯೆಗಳ ನಡುವೆಯೇ ರಾಹುಲ್ ಗಾಂಧಿ ಪಾರ್ಟಿ ಮೂಡ್ ನಲ್ಲಿ ಇರುವುದು, ಸ್ನೇಹಿತರ ಜೊತೆಗೆ ಎಂಜಾಯ್ ಮಾಡುತ್ತಿರುವುದನ್ನು ನೋಡಿ ಜನರು ಅಸಮಾಧಾನವನ್ನು ಹೊರ ಹಾಕಿದ್ದಾರೆ. ಈ ವೀಡಿಯೋವನ್ನು ಶೇರ್ ಮಾಡಿಕೊಂಡ ಬಿಜೆಪಿ ನಾಯಕ ಕಪಿಲ್ ಮಿಶ್ರಾ, ಯಾರು? ಅವರು ಯಾರು? ಎಂದು ಬರೆದುಕೊಂಡಿದ್ದಾರೆ.
ಬಿಜೆಪಿಯ ಸೋಶಿಯಲ್ ಮೀಡಿಯಾ ಉಸ್ತುವಾರಿ ಅಮಿತ್ ಮಾಳವೀಯ ಅವರು ಈ ವೀಡಿಯೋ ಶೇರ್ ಮಾಡಿಕೊಂಡು, ಮುಂಬೈ ಮೇಲೆ ಧಾ ಳಿ ನಡೆದಾಗಲು ರಾಹುಲ್ ಗಾಂಧಿ ನೈಟ್ ಕ್ಲಬ್ ನಲ್ಲಿದ್ದರು. ಅವರ ಪಕ್ಷ ವಿ ಸ್ಪೋ ಟ ಗೊಂಡಾಗಲು ರಾಹುಲ್ ಗಾಂಧಿ ನೈಟ್ ಕ್ಲಬ್ ನಲ್ಲಿದ್ದರು. ಅವರು ಸ್ಥಿರವಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದು, ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಾ ಸಾಗಿದೆ. ಇದಕ್ಕೆ ಬಹಳಷ್ಟು ಪ್ರತಿಕ್ರಿಯೆಗಳು ಹರಿದು ಬರುತ್ತಿವೆ.